ದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಜಾಮೀನು ಅರ್ಜಿ ಸಲ್ಲಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೊರ್ಟ್ ತಿರಸ್ಕಾರ ಮಾಡಿದೆ.
ತಮಗೆ ಗಂಭೀರ ಸ್ವರೂಪದ ಕಾಯಿಲೆ ಇದ್ದು, ಪಿಇಟಿ ಹಾಗೂ ಸಿಟಿ ಸ್ಕ್ಯಾನ್ ಮಾಡಿಸಬೇಕು. ಈ ಹಿನ್ನೆಲೆಯಲ್ಲಿ 7 ದಿನಗಳ ಕಾಲ ಜಾಮೀನು ವಿಸ್ತರಿಸುವಂತೆ ಕೇಳಿದ್ದರು. ಆದರೆ ಇದೀಗ ಜಾಮೀನು ಅರ್ಜಿ ತಿರಸೃತವಾದ ಹಿನ್ನೆಲೆ ಈ ಹಿಂದೆ ಸುಪ್ರೀಂಕೋರ್ಟ್ ನೀಡಿದ್ದ ಆದೇಶದ ಅನುಸಾರ ಜೂನ್ 2 ರಂದು ಜೈಲಿಗೆ ತೆರಳಬೇಕಾಗುತ್ತದೆ.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅವರು ಜೈಲು ಸೇರಿದ್ದ ಅವರಿಗೆ ಕೆಲ ದಿನಗಳ ಹಿಂದೆ ಜಾಮೀನು ದೊರೆತಿತ್ತು. ಬಳಿಕ ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನದ ಒಂದು ದಿನದ ಬಳಿಕ ಅಂದರೆ ಜೂನ್ 2ರಂದು ತಿಹಾರ್ ಜೈಲಿನಲ್ಲಿ ಶರಣಾಗುವಂತೆ ಕೋರ್ಟ್ ಆದೇಶ ನೀಡಿತ್ತು.
ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವ ನಿರ್ಧಾರ ಸೂಕ್ತ. ಅವರಿಗೆ ಯಾವುದೇ ಅಪರಾಧ ಇತಿಹಾಸವಿಲ್ಲ. ಅವರು ಸಮಾಜಕ್ಕೆ ಬೆದರಿಕೆಯಲ್ಲ. ಅವರ ವಿರುದ್ಧ ಗಂಭೀರ ಆರೋಪಗಳಿವೆ ಆದರೆ ಅದ್ಯಾವುದರಲ್ಲೂ ಸಾಬೀತಾಗಿ ಶಿಕ್ಷೆಯಾಗಿಲ್ಲ ಎಂದು ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಹೇಳಿತ್ತು.