ದೆಹಲಿ: ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ದೇಶದ 2ನೇ ಅತ್ಯುನ್ನತ ಕ್ರೀಡಾ ಗೌರವ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ದೆಹಲಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೊಹಮ್ಮದ್ ಶಮಿ ಅವರಿಗೆ ಅರ್ಜುನ ಪ್ರಶಸ್ತಿ ನೀಡಿದರು. 2023ರ ಏಕದಿನ ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಕಾರಣ ಶಮಿ ಅವರನ್ನು ಬಿಸಿಸಿಐ ಅರ್ಜುನ ಪ್ರಶಸ್ತಿಗೆ ಶಿಫಾರಸ್ಸು ಮಾಡಿತ್ತು.
2023 ರ ಏಕದಿನ ವಿಶ್ವಕಪ್ ನಲ್ಲಿ ಭಾರತ ತಂಡದ ಪರ ಮೊಹಮ್ಮದ್ ಶಮಿ ಅವರು ಕೇವಲ 7 ಪಂದ್ಯಗಳನ್ನು ಆಡಿದ್ದರು. ಈ ಸಂದರ್ಭ 10.70 ರ ಸರಾಸರಿಯಲ್ಲಿ ಆಡಿದ 7 ಪಂದ್ಯಗಳಿಂದ 24 ವಿಕೆಟ್ ಗಳನ್ನು ಪಡೆಯುತ್ತಾರೆ. ಈ ಮೂಲಕ 2023 ರ ಏಕದಿನ ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್ ಆಗಿ ಅವರು ಹೊರಹೊಮ್ಮಿದ್ದಾರೆ. ಶಮಿ ಅವರು ಪ್ರದರ್ಶಿಸಿದ ಅತ್ಯುತ್ತಮ ಪ್ರದರ್ಶನದ ಪ್ರತಿಫಲವಾಗಿ ಇದೀಗ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಯಿತು.