ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ.!

 

 

ಚಿತ್ರದುರ್ಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ಜನಾಂಗದವರ ಏಳಿಗೆಗಾಗಿ ಸ್ವಯಂ ಉದ್ಯೋಗ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫೆ.29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿಯನ್ನು https://kmdconline.karnataka.gov.in  ಜಾಲತಾಣದ ಮೂಲಕ ಸಲ್ಲಿಸಬಹುದಾಗಿದೆ.

Advertisement

ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಜನಾಂಗದ ಏಳಿಗೆಗಾಗಿ ಈ ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ಕೃಷಿ ಆಧಾರಿತ ಚಟುವಟಿಕೆ ಮುಂತಾದವುಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನವಾಗಿ ಘಟಕದ ವೆಚ್ಚ ಶೇ.33% ಅಥವಾ ಗರಿಷ್ಠ ರೂ.1ಲಕ್ಷದವರೆಗೆ ಸಹಾಯಧನ ನೀಡಲಾಗುವುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿರಬೇಕು. ಕರ್ನಾಟಕದ ನಿವಾಸಿಯಾಗಿರಬೇಕು. ಕನಿಷ್ಟ 18 ವರ್ಷ ಮೇಲ್ಪಟ್ಟು 55 ವರ್ಷದೊಳಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ ರೂ.81,000/- ಹಾಗೂ ನಗರ ಪ್ರದೇಶದಲ್ಲಿ ರೂ.1,03,000 ಮೀರಿರಬಾರದು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೆಂದ್ರ, ರಾಜ್ಯ ಸರ್ಕಾರಿ, ಪಿಎಸ್‍ಯು ಉದ್ಯೋಗಿಯಾಗಿರಬಾರದು. ಕೆ.ಎಂ.ಡಿ.ಸಿಯಲ್ಲಿ ಸುಸ್ಥಿರರಾಗಿರಬಾರದು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಅಥವಾ ದೂರವಾಣಿ ಸಂಖ್ಯೆ 08194-226412, 8277944213 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement