ಬೆಂಗಳೂರು: 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ಅಭ್ಯರ್ಥಿಗಳಿಗೆ 10 ತಿಂಗಳ ವಸತಿ ಸಹಿತ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 16 ಅರ್ಜಿ ಸಲ್ಲಿಸಲು ಕೊನೆ ದಿನ.
http://sevasindhu.karnataka.gov.in/sevasindhu/Departmentservices ವೆಬ್ಸೈಟ್ ಲಿಂಕ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.