ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅವಧಿಗೂ ಮೊದಲೇ ಬೇಸಿಗೆ ಝಳ ಹೆಚ್ಚಾಗಿದ್ದು ತಾಪಮಾನ ದಿಢೀರ್ ಏರಿಕೆಯಾಗಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ. ಚಳಿಗಾಲದ ಅಂತ್ಯದ ನಡುವೆಯೇ ರಾಜ್ಯಕ್ಕೆ ಬೇಸಿಗೆ ಝಳ ಕಾಲಿಟ್ಟಿದ್ದು, ಅವಧಿಗೂ ಮೊದಲೇ ಬೆಂಗಳೂರಿನಲ್ಲಿ ಬೇಸಿಗೆ ಆರಂಭವಾಗಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರು ನಾಲ್ಕು ವರ್ಷದ ದಾಖಲೆಯನ್ನು ಮುರಿದಿದೆ. 2018ರ ಬಳಿಕ ಮಾ. 5 ರಂದು ದಾಖಲಾಗಿದೆ. ಬೆಂಗಳೂರಿನಲ್ಲಿ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ಮುಂದಿನ ದಿನಗಳಲ್ಲಿ ತಾಪಮಾನ ಏರಿಕೆಯೊಂದಿಗೆ ಶುಷ್ಕ ಹವಾಮಾನದ ಮುನ್ಸೂಚನೆ ಇದೆ. ಬಿರು ಬೇಸಿಗೆ ನಡುವೆ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ.