ಬೆಂಗಳೂರು : ಹಾಸನದ ಅಶ್ಲೀಲ ವಿಡಿಯೋ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆಗೆ ಆದೇಶ ಹೊರಡಿಸುತ್ತಿದ್ದಂತೆ, ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ ಎನ್ನಲಾಗಿದೆ. ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮತದಾನ ಮುಗಿದ ಬಳಿಕ ಜರ್ಮನಿಗೆ ತೆರಳಿದ್ದಾರೆ. ಶನಿವಾರ ಬೆಳಗ್ಗೆ 3 :15ಕ್ಕೆ ಬೆಂಗಳೂರಿನಿಂದ ಜರ್ಮನಿಯ ಫ್ರಂಕ್‌ಫರ್ಟ್‌ಗೆ ತೆರಳಿದ ಮಾಹಿತಿ ಲಭ್ಯವಾಗಿದೆ. ಆದರೆ ಇದು ಪೂರ್ವ ನಿಯೋಜಿತ ಭೇಟಿಯೋ? ಅಥವಾ ಎಸ್‌ಐಟಿ ರಚನೆಯಾಗುತ್ತಿದೆ ಎನ್ನುವ ಸುಳಿವು ಸಿಕ್ಕ ಕೂಡಲೇ ಎಸ್ಕೇಪ್ ಆದರಾ ಎಂಬ ಚರ್ಚೆಗಳು ನಡೆಯುತ್ತಿವೆ. ಇನ್ನು ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
