ದಾವಣಗೆರೆ: ಅಶ್ಲೀಲ ವಿಡಿಯೋ ಹರಿಬಿಡುವ ಬೇದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.
ಯುವರಿಬ್ಬರ ಬ್ಲ್ಯಾಕ್ಮೇಲ್ಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದ 17 ವರ್ಷ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.
ಶಾಲೆಗೆ ಬರುವ ವೇಳೆ ಪರಿಚಯವಾಗಿದ್ದ ಇಬ್ಬರು ಯುವಕರು, ಒಂದು ದಿನ ಬೇಕರಿ ತಿನಿಸಿನಲ್ಲಿ ಮತ್ತು ಬರುವ ಔಷಧಿ ಹಾಕಿ ಬಳಿಕ ಆಶ್ಲೀಲ ವಿಡಿಯೋ ಮಾಡಿಕೊಂಡಿದ್ದರು. ಬಳಿಕ ಆ ವಿಡಿಯೋ ಇಟ್ಟುಕೊಂಡು ತಾವು ಕರೆದಾಗ ಬರದಿದ್ದರೇ ವಿಡಿಯೋವನ್ನು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲೆ ಮಾಡುತ್ತಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡಿದ್ದಳು, ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಕೂಡಲೇ ಕುಟುಂಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ಇದೀಗ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಉಸಿರು ನಿಲ್ಲಿಸಿದ್ದಾಳೆ.
ಈ ಘಟನೆಯು ದಾವಣಗೆರೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಆರೋಪಿಗಳಿಗೆ ಶಿಕ್ಷೆ ಆಗಲಿ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ನೀಡಿದ್ದ ವಿಡಿಯೋ ಹೇಳಿಕೆ ವೈರಲ್ ಆಗಿದೆ.!