ಚಿತ್ರದುರ್ಗ: ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢಿಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ 2021ರ ಆಗಸ್ಟ್ 26 ರಿಂದ ನೋಂದಾಯಿಸಲಾಗುತ್ತಿದ್ದು, 2022ರ ಮಾರ್ಚ್ 31 ರವರೆಗೆ ನೋಂದಣಿಯಾಗಿ ಮತ್ತು ಈ ದಿನಾಂಕದೊಳಗೆ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ರೂ.2 ಲಕ್ಷಗಳ ಅಪಘಾತ ಪರಿಹಾರ ಒದಗಿಸಲಾಗುವುದು. ಈ ಸಂಬಂಧ ಅಸಂಘಟಿತ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅಪಘಾತದಿಂದ ಮರಣ ಹೊಂದಿದ್ದಲ್ಲಿ ಸಲ್ಲಿಸಬೇಕಾದ ದಾಖಲೆಗಳು: ಫಲಾನುಭವಿಯ ಆಧಾರ್ ಸಂಖ್ಯೆ, UAN ಕಾರ್ಡ್ (ಇ-ಶ್ರಮ್ ಕಾರ್ಡ್) ಸಂಖ್ಯೆ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಎಫ್‍ಐಆರ್/ಪಂಚನಾಮ, In case claimant is minor, Guardian should produce certificate of guardianship issued by District Court while filling the claim.
ಅಪಘಾತದಿಂದ ಅಂಗವೈಕಲ್ಯ ಹೊಂದಿದ್ದಲ್ಲಿ ಸಲ್ಲಿಸಬೇಕಾದ ದಾಖಲೆಗಳು: ಫಲಾನುಭವಿಯ ಆಧಾರ್ ಸಂಖ್ಯೆ, UAN ಕಾರ್ಡ್ (ಇ-ಶ್ರಮ್ ಕಾರ್ಡ್) ಸಂಖ್ಯೆ, ಅಪಘಾತದಿಂದ ಉಂಟಾದ ಅಂಗವೈಕಲ್ಯವನ್ನು ಸೂಚಿಸುವ ಡಿಸ್ಚಾರ್ಜ್ ಸಾರಾಂಶವನ್ನು ಒಳಗೊಂಡಿರುವ ಆಸ್ಪತ್ರೆಯ ದಾಖಲೆ, Disability certificate issued by the authorised personnel of State/UT Govt.or Unique Disability Identity Card (permanent) issued by Department of Empowerment of Persons with Disabilities, M/O Social Justice & Empowerment, Govt. of India.
ಈ ಮೇಲೆ ತಿಳಿಸಿದ ಸೂಕ್ತ ದಾಖಲೆಯೊಂದಿಗೆ ಕಾರ್ಮಿಕ ಅಧಿಕಾರಿಗಳ ಕಛೇರಿ, ಜೆ.ಸಿ.ಆರ್ ಬಡಾವಣೆ, ಎಸ್.ಬಿ.ಐ ಬ್ಯಾಂಕ್ ಹತ್ತಿರ, 1ನೇ ಮಹಡಿ, ಚಿತ್ರದುರ್ಗ ಇಲ್ಲಿಗೆ ಮಾರ್ಚ್ 25ರೊಳಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಣೆಯಲ್ಲಿ ತಿಳಿಸಿದ್ದಾರೆ.