ಹೊಸಪೇಟೆ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಆಹಾರ ಮತ್ತು ನಾಗರಿಕರ ಸರಬರಾಜು ನಿಗಮ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು ಹಾಗೂ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರು/ ಕಿರಿಯ ಸಹಾಯಕರ ಹುದ್ದೆಗಳ ನೇಮಕಾತಿ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಅ.29ರಂದು ಜಿಲ್ಲೆಯಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವಾಕರ ಎಂ.ಎಸ್. ಅವರು ಆದೇಶಿಸಿದ್ದಾರೆ.
ವಿವಿಧ ಸಂಸ್ಥೆಗಳಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರು/ ಕಿರಿಯ ಸಹಾಯಕರ ಹುದ್ದೆಗಳ ನೇಮಕಾತಿಯ ಪರೀಕ್ಷೆಗಳು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ 11, ಹಗರಿಬೊಮ್ಮನಹಳ್ಳಿಯ 05, ಕೂಡ್ಲಿಗಿಯ 02 ಸೇರಿ ಒಟ್ಟು 18 ಪರೀಕ್ಷಾ ಕ್ಷೇದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ದಿನದಂದು ಪರೀಕ್ಷೆ ಕೇಂದ್ರಗಳ 200 ಮೀ. ಆವರಣವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್, ಕಂಪ್ಯೂಟರ್ ಮತ್ತು ಸೈಬರ್ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಿದ್ದಾರೆ.