ಅಮರಾವತಿ: ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷವಾದ ಟಿಡಿಪಿ 132 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷವು ಕೇವಲ 15 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ನಟ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಟಿಡಿಪಿಯ ಗೋರಂಟ್ಲಾ ಬುಚ್ಚಯ್ಯ ಚೌಧರಿ ಅವರು ರಾಜಮಂಡ್ರಿ ಗ್ರಾಮಾಂತರ ಕ್ಷೇತ್ರದಿಂದ 64,000 ಮತಗಳಿಂದ ಗೆದ್ದಿದ್ದಾರೆ. 175 ಸ್ಥಾನಗಳನ್ನು ಹೊಂದಿರುವ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಬಹುಮತ ಸಾಧಿಸಲು 88 ಮ್ಯಾಜಿಕ್ ನಂಬರ್ ಆಗಿದೆ.