ನವದೆಹಲಿ : ಆಕಸ್ಮಿಕವಾಗಿ ಗಡಿರೇಖೆ ದಾಟಿ ಪಾಕಿಸ್ತಾನ ಸೇನೆಯಿಂದ ಬಂಧನಕ್ಕೆ ಒಳಗಾಗಿದ್ದ ಗಡಿ ಭದ್ರತಾ ಪಡೆ(ಬಿಎಸ್ಎಫ್) ಯೋಧ ಪೂರ್ಣಮ್ ಕುಮಾರ್ ಶಾ ಅವರು ವಾಘಾ ಗಡಿ ಮೂಲಕ ಭಾರತಕ್ಕೆ ಮರಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ಭೂಪ್ರದೇಶವನ್ನು ಬಿಎಸ್ಎಫ್ ಕಾನ್ಸ್ಟೆಬಲ್ ಆಕಸ್ಮಿಕವಾಗಿ ದಾಟಿದ್ದರು. ಇದೀಗ ಏಪ್ರಿಲ್ 24 ರಿಂದ ಬಂಧನಕ್ಕೊಳಗಾದ ಕಾನ್ಸ್ಟೆಬಲ್ ಪೂರ್ಣಮ್ ಕುಮಾರ್ ಶಾ ಅವರನ್ನು ಅಮೃತಸರದ ಅಟ್ಟಾರಿ ಗಡಿ ಜಂಟಿ ಚೆಕ್ ಪೋಸ್ಟ್ ನಲ್ಲಿ ಬುಧವಾರ ಬೆಳಗ್ಗೆ 10:30ಕ್ಕೆ ಹಸ್ತಾಂತರ ಮಾಡಲಾಗಿದೆ.
ಪೂರ್ಣಮ್ ಕುಮಾರ್ ಶಾ ಅವರು ಸೇನಾ ಸಮವಸ್ತ್ರ ಧರಿಸಿದ್ದರು ಹಾಗೂ ಸೇವಾ ಬಂದೂಕು ಹೊಂದಿದ್ದರು. ರೈತರೊಂದಿಗೆ ಇದ್ದ ಅವರು, ವಿಶ್ರಾಂತಿಗಾಗಿ ನೆರಳು ಅರಸಿ ಹೊರಟಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಅವರನ್ನು ಪಾಕ್ ಸೇನೆ ಬಂಧಿಸಿತ್ತು.