ನವದೆಹಲಿ:ಇಸ್ರೋ ಸಂಸ್ಥೆ ಸೂರ್ಯನನ್ನು ಅಧ್ಯಯನ ಮಾಡಲು ಆದಿತ್ಯ ಎಲ್-1 ಮಿಷನ್ ಅನ್ನು ಶನಿವಾರ ಬೆಳಗ್ಗೆ 11.50ಕ್ಕೆ ಶ್ರೀ ಹರಿಕೋಟಾದ ಸತೀಶ್ ಉಡಾವಣೆ ಕೇಂದ್ರದಿಂದ ಉಡಾವಣೆ ಮಾಡಿತು. ಇಸ್ರೋ ವಿಜ್ಞಾನಿಗಳ ಈ ಸಾಧನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ, ಚಂದ್ರಯಾನ-3 ಯಶಸ್ಸಿನ ನಂತರ ಭಾರತ ತನ್ನ ಬಾಹ್ಯಾಕಾಶ ಯಾನವನ್ನು ಮುಂದುವರಿಸಿದೆ. ಭಾರತದ ಮೊದಲ ಸೌರ ಮಿಷನ್, ಆದಿತ್ಯ ಎಲ್-1ನ ಯಶಸ್ವಿ ಉಡಾವಣೆಗಾಗಿ ಇಸ್ರೋ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳಿಗೆ ಅಭಿನಂದನೆಗಳು.
ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಅಭಿವೃದ್ಧಿಪಡಿಸಲು ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಬರೆದು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.