ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು, ಕೊಣಾಜೆ, ಸುಬ್ರಹ್ಮಣ್ಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಮರಳಿಸುವಂತೆ ಮತ್ತು ನಾಡಿಗೆ ಬಾರದಂತೆ ಕ್ರಮ ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸುಳ್ಯ ಶಾಸಕರಿಗೆ ಭರವಸೆ ನೀಡಿದ್ದಾರೆ.
ಬೆಂಗಳೂರಿನ ವಿಕಾಸಸೌಧದ ಕಚೇರಿಯಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಮನವಿ ಸ್ವೀಕರಿಸಿದ ಸಚಿವರು, ಈ ವರ್ಷ ಮಳೆಯ ಪ್ರಮಾಣ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ನೀರು, ಆಹಾರ ಅರಸಿ ಆನೆಗಳು ಕಾಫಿ ತೋಟಗಳಿಗೆ ಬರುತ್ತಿವೆ. ಆನೆಗಳು ನಾಡಿಗೆಬಾರದಂತೆ ತಡೆಯಲು ರೈಲ್ವೆ ಬ್ಯಾರೀಕೇಡ್ ನಿರ್ಮಾಣವೇ ಪರಿಹಾರವಾಗಿದ್ದು, ಆದ್ಯತೆಯ ಮೇಲೆ ಈ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಅರಣ್ಯದೊಳಗೆ ಆನೆಗಳಿಗೆ ನೀರು ಆಹಾರ ಸಿಗುವಂತೆ ಕ್ರಮ ವಹಿಸಲೂ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು.