ಆಯಾ ವಾರ್ಡ್ ಗಳಲ್ಲಿ ಇ-ಆಸ್ತಿ ಅಂದೋಲನ ಮೇಯರ್ ಚಮನ್‍ಸಾಬ್.ಕೆ

WhatsApp
Telegram
Facebook
Twitter
LinkedIn

  ದಾವಣಗೆರೆ:  ನವೆಂಬರ್ ಮಾಹೆಯಿಂದ ವಾರ್ಡ್‍ಗಳಲ್ಲಿ ಇ-ಆಸ್ತಿ ಅಂದೋಲನ ಪ್ರಾರಂಭ ಮಾಡಲಾಗುವುದು. ಎಲ್ಲಾ ಆಸ್ತಿ ಮಾಲೀಕರುಗಳು ಆಸ್ತಿ ತೆರಿಗೆ ಪಾವತಿಸಿದ ಚಲನ್, ಇ.ಸಿ. ಮನೆಗೆ ಸಂಬಂಧಿಸಿದ ದಾಖಲೆಗಳನ್ನು ಸಿದ್ದವಾಗಿಟ್ಟುಕೊಳ್ಳಬೇಕು. ಎಂದು ಮಹಾನಗರ ಪಾಲಿಕೆಯ ಮಹಾಪೌರ ಚಮನ್‍ಸಾಬ್ ಕೆ. ತಿಳಿಸಿದರು.

ಮಹಾನಗರ ಪಾಲಿಕೆಯ ಮೇಯರ್ ಕಾರ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮಹಾನಗರ ಪಾಲಿಕೆಯ  ಎಲ್ಲಾ ವಾರ್ಡುಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದು. ಇದಕ್ಕೆ ಬೇಕಾಗುವ ಸಲಕರಣೆಗಳು, ವಾಹನಗಳು ಮತ್ತು ಮಾನವ ಸಂಪನ್ಮೂಲವನ್ನು ಹೆಚ್ಚುವರಿಯಾಗಿ ತೆಗೆದುಕೊಂಡು ಎಲ್ಲಾ ವಾರ್ಡುಗಳಲ್ಲಿ ಸ್ವಚ್ಛತೆ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಪಾಲಿಕೆಯಿಂದ ಆಂದೋಲನದ ವೇಳಾಪಟ್ಟಿಯನ್ನು ಪ್ರಕಟಪಡಿಸಿದ ನಂತರ ನಿಗದಿತ ದಿನಾಂಕಗಳಂದು ಆಯಾ ವಾರ್ಡುಗಳಲ್ಲಿ ಸ್ಥಳದಲ್ಲಿಯೇ ಇ-ಸ್ವತ್ತು ನೀಡಲಾಗುವುದು. ಹಾಗೂ ಈ ಬಾರಿ  ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನವೆಂಬರ್ ತಿಂಗಳನ್ನು ಕನ್ನಡ ಸ್ವಚ್ಛತಾ ಮಾಸವನ್ನಾಗಿ ಆಚರಿಸಲಾಗುವುದು ಎಂದರು..

ಮಹಾನಗರ ಪಾಲಿಕೆಯ ಮೇಯರ್ ಕಾರ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮಹಾನಗರ ಪಾಲಿಕೆಯ  ಎಲ್ಲಾ ವಾರ್ಡುಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದು. ಇದಕ್ಕೆ ಬೇಕಾಗುವ ಸಲಕರಣೆಗಳು, ವಾಹನಗಳು ಮತ್ತು ಮಾನವ ಸಂಪನ್ಮೂಲವನ್ನು ಹೆಚ್ಚುವರಿಯಾಗಿ ತೆಗೆದುಕೊಂಡು ಎಲ್ಲಾ ವಾರ್ಡುಗಳಲ್ಲಿ ಸ್ವಚ್ಛತೆ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಖಾಲಿ ನಿವೇಶನಗಳ ಮಾಲೀಕರು ತಮ್ಮ ನಿವೇಶನಗಳಲ್ಲಿ ಬೆಳೆದಿರುವ ಗಿಡಗೆಂಟಿಗಳನ್ನು ತಾವೇ ಸ್ವಚ್ಛಗೊಳಿಸಿಕೊಳ್ಳಬೇಕು. ತಪ್ಪಿದಲ್ಲಿ ಮಹಾನಗರಪಾಲಿಕೆಯಿಂದ ಸ್ವಚ್ಚಗೊಳಿಸಿ ಅವರ ಆಸ್ತಿ ತೆರಿಗೆಯಲ್ಲಿ ಸೇರಿಸಲಾಗುವುದು ಎಂದು ತಿಳಿಸಿದರು.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon