ಹೊಸಪೇಟೆ : ರಾಷ್ಟಿçÃಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸದಸ್ಯ ಕಾರ್ಯದರ್ಶಿ ಜಂಬಯ್ಯ ನಾಯಕ ಅವರು ತಿಳಿಸಿದ್ದಾರೆ.
ವೈದ್ಯಾಧಿಕಾರಿಗಳು, ಶೂಷ್ರೂಶಕಿಯರು, ಡಯಟ್ ಕೌನ್ಸಿಲರ್, ಆಡಿಯೋಲಾಜಿಸ್ಟ್, ಆಡಿಯೋ ಮೆಟ್ರಿಕ್ ಸಹಾಯಕರು, ಶ್ರವಣ ದೋಷವುಳ್ಳ ಮಕ್ಕಳ ಬೊಧಕರು, ದಂತ ವೈದ್ಯ, ಡೆಂಟಲ್ ಹೈಜೆನಿಸ್ಟ್ ಹಾಗೂ ಡೆಂಟಲ್ ಟೆಕ್ನಿಷಿಯನ್ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ದ ಹುದ್ದೆಗಳಿಗೆ ತಕ್ಕಂತೆ ಅರ್ಹತೆ ಹಾಗೂ ಕೋವಿಡ್-19 ಸಂದರ್ಭದಲ್ಲಿ ಸಲ್ಲಿಸಿದ ಸೇವಾವಧಿಗೆ ಅನುಗುಣವಾಗಿ ಆದ್ಯತೆ ನೀಡಲಾಗುತ್ತದೆ. ಹೊಸಪೇಟೆಯ ತಾಯಿ ಮತ್ತು ಮಕ್ಕಳ(ಎಂಸಿಎಚ್) ಆಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಆರ್ಸಿಎಚ್ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಸ್ವಯಂ ಧೃಡೀಕರಿಸಿದ ಎಲ್ಲಾ ದಾಖಲಾತಿಗಳ ಪ್ರತಿಗಳನ್ನು ಅ.16ರ ಸೋಮವಾರ ಸಂಜೆ 5.30ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳ ಹಾಗೂ ಇತರ ಮಾಹಿತಿಗಾಗಿ https://vijayanagara.nic.in ವೆಬ್ಸೈಟ್ಗೆ ಭೇಟಿ ನೀಡಬಹುದು.