ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಪಾಕಿಸ್ತಾನ ಭಾರತದೊಂದಿಗೆ ತನ್ನ ವ್ಯಾಪಾರ ಸಂಬಂಧವನ್ನು ಮತ್ತೆ ಸರಿಪಡಿಸಿಕೊಳ್ಳಲು ಯತ್ನಿಸುತ್ತಿದೆ. ಖುದ್ದು ಪಾಕ್‌ನ ವಿದೇಶಾಂಗ ಸಚಿವ ಮೊಹಮ್ಮದ್ ಇಶಾಕ್ ಧಾರ್ ಈ ವಿಚಾರವನ್ನು ಪಾಕಿಸ್ತಾನ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಹೇಳಿದ್ದಾರೆ. ಲಂಡನ್‌ನಲ್ಲಿ ನಡೆದಿರುವ ಪರಮಾಣು ಶಕ್ತಿ ಶೃಂಗಸಭೆಯಲ್ಲಿ ಧಾರ್ ಭಾಗಿಯಾಗಿದ್ದರು.
ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಪಾಕಿಸ್ತಾನಿ ಉದ್ಯಮಿಗಳಿಗೆ ಭಾರತದ ಜತೆಗೆ ವ್ಯಾಪಾರ ಸಂಬಂಧ ಹೊಂದುವ ಹಂಬಲವಿದೆ. ಈ ನಿಟ್ಟಿನಲ್ಲಿ ಆ ಸಂಬಂಧವನ್ನು ಮತ್ತೆ ಸರಿಪಡಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದಿದ್ದಾರೆ. 2019ರಲ್ಲಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ವ್ಯಾಪಾರ ಸಂಬಂಧವನ್ನು ಪಾಕ್ ತಗ್ಗಿಸಿತ್ತು.