ಆಸ್ಟ್ರೇಲಿಯಾ: ವನೌಟು ದ್ವೀಪದಲ್ಲಿ ಭಾರೀ ಪ್ರಮಾಣದಲ್ಲಿ ಭೂಕಂಪ ಸಂಭವಿಸಿದೆ.
ಈ ಪ್ರದೇಶದಲ್ಲಿ ಭೂಕಂಪನವು ರಿಕ್ಟರ್ ಮಾಪನದಲ್ಲಿ 6.7 ತೀವ್ರತೆ ದಾಖಲಾಗಿದೆ. ಆಸ್ಟ್ರೇಲಿಯಾ ಸರ್ಕಾರದ ಭೂವಿಜ್ಞಾನ ಇಲಾಖೆ ಪ್ರಕಾರ, ಇಂದು ಬೆಳಿಗ್ಗೆ 10.17ಕ್ಕೆ ಈ ಭೂಮಿ ಕಂಪಿಸಿದೆ ಎಂದು ತಿಳಿಸಿದೆ.
ಭೂಮಿಯ ಮೇಲ್ಮಯಿಂದ 70 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ಹೇಳಿದೆ. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಆಸ್ತಿಪಾಸ್ತಿ ಹಾನಿಯಾಗಿಲ್ಲ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.