ಬೆಂಗಳೂರು: ಆಹಾರ ವ್ಯರ್ಥ ವಿಚಾರಕ್ಕೆ ಸಂಬಂಧಿಸಿ ಕಾನೂನು ರೂಪಿಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆಯಂತೆ. ಈ ಬಗ್ಗೆ ಖುದ್ದು ಸಚಿವ KH ಮುನಿಯಪ್ಪ ಸುಳಿವು ನೀಡಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಮಾತನಾಡಿದ ಸಚಿವರು, ಹೋಟೆಲ್‌ಗಳು ಮತ್ತು ಮದುವೆಗಳಲ್ಲಿ ಆಹಾರ ವ್ಯರ್ಥವಾಗುವುದನ್ನು ತಡೆಯಲು ಸರ್ಕಾರವು ಕರಡು ನಿಯಮ ರೂಪಿಸಲಿದೆ.
ದೇಶದಲ್ಲಿ ವಾರ್ಷಿಕವಾಗಿ 90,000 ಕೋಟಿ ಮೌಲ್ಯದ ಆಹಾರ ವ್ಯರ್ಥವಾಗುತ್ತದೆ. ಆಹಾರವನ್ನು ವ್ಯರ್ಥ ಮಾಡದಂತೆ ಮಕ್ಕಳಿಗೆ ಕಲಿಸುವುದು& ಸರಿಯಾಗಿ ಬಳಸಿಕೊಳ್ಳುವುದರ ಬಗ್ಗೆ ಜಾಗೃತಿ ಮೂಡಿಸಬೇಕಾದ ಅನಿವಾರ್ಯತೆ ಇದೆ ಎಂದರು.