ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಆಗಸ್ಟ್ 06ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ ಈರುಳ್ಳಿ, ಟೊಮಾಟೋ, ಮೆಣಸಿನಕಾಯಿ ಮತ್ತು ಬದನೆಕಾಯಿ ಬೆಳೆಗಳ ಸುಧಾರಿತ ಬೇಸಾಯ ತಾಂತ್ರಿಕತೆಗಳ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯ ತೋಟಗಾರಿಕೆ ತಜ್ಞರಾದ ಡಾ. ಪ್ರಕಾಶ್ ಕೆರೂರ್ ಮತ್ತು ಡಾ. ಶ್ರುತಿ ಅವರು“ಈರುಳ್ಳಿ, ಟೊಮಾಟೋ, ಮೆಣಸಿನಕಾಯಿ ಮತ್ತು ಬದನೆಕಾಯಿ ಬೆಳೆಗಳಲ್ಲಿ ಅನುಸರಿಸಬೇಕಾದ ಬೇಸಾಯ ಕ್ರಮಗಳು ಹಾಗೂ ಕೆವಿಕೆ ಬಬ್ಬೂರು ಕೀಟಶಾಸ್ತçಜ್ಞ ಟಿ.ರುದ್ರಮುನಿ ಅವರು ಈ ಬೆಳೆಗಳಲ್ಲಿ ಬರುವ ಪ್ರಮುಖ ಕೀಟ ಮತ್ತು ರೋಗಗಳ ನಿರ್ವಹಣೆ ಕುರಿತು ವಿಷಯ ಮಂಡನೆ ಮಾಡುವರು.
ಆಸಕ್ತ 50 ಜನರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಆರ್.ರಜನೀಕಾಂತ, ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬಬ್ಬೂರು ಫಾರಂ (8277931058), ಸಿಕಂದರ್ ಬಾಷಾ, ಕೃಷಿ ಅಧಿಕಾರಿ (9845249832) ಮತ್ತು ಪವಿತ್ರಾ ಎಂ. ಜೆ. (9535412286) ಅವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.
ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‌ಐಡಿಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿ ತರಬೇಕು ಎಂದು ಪ್ರಕಟಣೆ ತಿಳಿಸಿದೆ.