ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ನಾಳೆಯಿಂದ 12 ದಿನಗಳ ಕಾಲ ಪ್ರದರ್ಶನ ಜರುಗಲಿದ್ದು, ಈ ವೇಳೆ ಸಂಚಾರ ದಟ್ಟಣೆಯಾಗುವುದರಿಂದ ಲಾಲ್ ಬಾಗ್ ಸುತ್ತಮುತ್ತ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಆಗಸ್ಟ್ 8ರಿಂದ 19ರವರೆಗೆ ಒಟ್ಟು 12 ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಪ್ರದರ್ಶನಕ್ಕೆ ಗಣ್ಯವ್ಯಕ್ತಿಗಳು, ಪ್ರವಾಸಿಗರು ಹಾಗೂ ಸಾರ್ವಜನಿಕರು ಒಳಗೊಂಡಂತೆ ಸುಮಾರು 8 ರಿಂದ 10 ಲಕ್ಷ ಜನರು ಫಲಪುಷ್ಟದ ಸವಿಯುವ ನಿರೀಕ್ಷೆಯಿದೆ. ಹೀಗಾಗಿ ಲಾಲ್ ಬಾಗ್ ನ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ವಾಹನ ನಿಲುಗಡೆ ನಿಷೇಧಿಸಿರುವ ರಸ್ತೆಗಳು ಡಾ.ಮರಿಗೌಡ ರಸ್ತೆ, ಲಾಲ್ ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ ವರೆಗಿನ ರಸ್ತೆಯ ಎರಡು ಬದಿಗಳಲ್ಲಿ ಕೆ.ಎಚ್.ರಸ್ತೆ ಹಾಗೂ ಕೆ.ಎಚ್.ವೃತ್ತದಿಂದ ಶಾಂತಿನಗರ ಜಂಕ್ಷನ್ ವರೆಗಿನ ಎರಡು ಬದಿಗಳಲ್ಲಿ ಲಾಲ್ ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್ ಬಾಗ್ ನ ಮುಖ್ಯದ್ವಾರದವರೆಗೆ ಸಿದ್ದಯ್ಯ ರಸ್ತೆ, ಉರ್ವಶಿ ಥಿಯೇಟರ್ ಜಂಕ್ಷನ್ ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್ ವರೆಗೆ ಬಿಎಂಟಿಸಿ ಬಸ್ ನಿಲ್ದಾಣದ ಜಂಕ್ಷನ್ ನಿಂದ ರಸ್ತೆಯ ಎರಡು ಬದಿಗಳಲ್ಲಿ ಕೃಂಬಿಗಲ್ ರಸ್ತೆ, ಲಾಲ್ ಬಾಗ್ ವೆಸ್ಟ್ ಗೇಟ್ ನಿಂದ ಟೀಚರ್ಸ್ ಕಾಲೇಜುವರೆಗೆ ಆರ್.ವಿ.ಟೀಚರ್ಸ್ ಕಾಲೇಜಿನಿಂದ ಅಶೋಕ ಪಿಲ್ಲರ್ ವರಗೆ ಅಶೋಕ ಪಿಲ್ಲರ್ ನಿಂದ ಸಿದ್ದಾಪುರ ಜಂಕ್ಷನ್ ವರೆಗೆ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು ಡಾ.ಮರಿಗೌಡ ರಸ್ತೆ, ಆಲ್ ಅಮೀನ್ ಕಾಲೇಜು ಆವರಣದಲ್ಲಿ ದ್ವಿಚಕ್ರ ವಾಹನ ನಿಲುಗಡೆ ಅವಕಾಶ. ಕೆ.ಎಚ್.ರಸ್ತೆ, ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನ ನಿಲುಗಡೆ ಸ್ಥಳಾವಕಾಶ ಡಾ.ಮರೀಗೌಡ ರಸ್ತೆ-ಹಾಪ್ ಕಾಮ್ಸ್, ಹಾಗೂ ಜೆ.ಸಿ.ರಸ್ತೆ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳಗಳಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನ ಪಾರ್ಕಿಂಗ್ ಮಾಡಬಹುದಾಗಿದೆ.