ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಮಳೆಯಾಗೋ ಜಿಲ್ಲೆಯಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ.
ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ತಮಿಳುನಾಡು ಮತ್ತು ಕೇರಳದ ಕಡಲ ತೀರದಲ್ಲಿ ಸುಮುದ್ರದ ಮೇಲ್ಮೈದ ಸುಳಿಗಾಳಿಯ ಪರಿಣಾಮ, ಬೆಂಗಳೂರಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಅಂತ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ರಾತ್ರಿ ಕೋಲಾರ, ತುಮಕೂರು, ಬೆಂಗಳೂರು, ಚಾಮರಾಜನಗರ, ರಾಮನಗರ ಜಿಲ್ಲೆಯಲ್ಲಿ ಮಳೆಯ ಆರ್ಭಟಿಸೋ ಸಾಧ್ಯತೆ ಇದೆ ಎಂದು ತಿಳಿಸಿದೆ.
ನಾಳೆ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದಿದೆ. ಅಲ್ಲದೇ ನಾಳೆ ನಾಡಿದ್ದು ಯೆಲ್ಲೋ ಅಲರ್ಟ್ ಅನ್ನು ಕೂಡ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಘೋಷಿಸಿದೆ.