ಮಹಿಳಾ ದಿನವನ್ನು ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ. ಮಹಿಳೆಯರ ಗೌರವ, ಸಮಾನತೆ ಮತ್ತು ಪ್ರಗತಿಯ ಬಗ್ಗೆ ಮಾತನಾಡುವುದು ಮಹಿಳಾ ದಿನದ ಮುಖ್ಯ ಉದ್ದೇಶವಾಗಿದೆ. ಈ ದಿನ ಕಾರ್ಯಾಗಾರಗಳು, ಅಭಿನಂದನಾ ಸಮಾರಂಭಗಳು, ವಾರ್ಷಿಕ ಕಾರ್ಯಗಳು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರಗಳಂತಹ ವಿವಿಧ ರೀತಿಯ ಕಾರ್ಯಕ್ರಮಗಳು ನಡೆಯುತ್ತವೆ.
1908ರಲ್ಲಿ ಅಮೆರಿಕದಲ್ಲಿ ಕಾರ್ಮಿಕ ಚಳವಳಿ ನಡೆದಿತ್ತು. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದುಡಿಯುವ ಮಹಿಳೆಯರು ಪಾಲ್ಗೊಂಡಿದ್ದರು. ಸುಮಾರು 15,000 ಮಹಿಳೆಯರು ನ್ಯೂಯಾರ್ಕ್ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದರು ಮತ್ತು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿದ್ದರು. ತಮ್ಮ ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಮತ್ತು ವೇತನ ಶ್ರೇಣಿಯನ್ನು ಹೆಚ್ಚಿಸಬೇಕು ಎಂದು ಕಾರ್ಮಿಕ ಮಹಿಳೆಯರು ಒತ್ತಾಯಿಸಿದ್ದರು.
ಮಹಿಳೆಯರಿಗೂ ಮತದಾನದ ಹಕ್ಕನ್ನು ನೀಡಬೇಕೆಂದು ಬೇಡಿಕೆಯಿಟ್ಟಿದ್ದರು. ಮಹಿಳೆಯರ ಧ್ವನಿ ಅಂದಿನ ಸರ್ಕಾರದ ಕಿವಿಗೆ ಬಿದ್ದಿತ್ತು. ನಂತರ 1909 ರಲ್ಲಿ, ಚಳುವಳಿಯ ಒಂದು ವರ್ಷದ ನಂತರ, ಅಮೆರಿಕಾದ ಸಮಾಜವಾದಿ ಪಕ್ಷ ಮಹಿಳಾ ದಿನವನ್ನು ಘೋಷಿಸಿತು. ಅಂದಿನಿಂದ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಮಹಿಳೆಯರ ಸಾಧನೆಯನ್ನು ನೆನೆಯುವ ಮೂಲಕ ಮಹಿಳೆಯರಿಗೆ ಪ್ರೋತ್ಸಾಹ ನೀಡಲಾಗುತ್ತದೆ.