ಬೆಂಗಳೂರು: ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಪ್ರತಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ. ಕರಾವಳಿ ಉದ್ದಕ್ಕೂ 35ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಎಚ್ಚರ ವಹಿಸಬೇಕು ಎಂದು ಇಲಾಖೆ ಹೇಳಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.