ದೆಹಲಿ: ಬಿಜೆಪಿ ನೇತೃತ್ವದ ಎನ್ ಡಿಎ ಒಕ್ಕೂಟದ ಹೊಸದಾಗಿ ಚುನಾಯಿತ ಸಂಸದ ಇಂದು ದೆಹಲಿಯಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ.
ಈ ಸಭೆಯನ್ನು ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಲಿದ್ದಾರೆ ಎನ್ನಲಾಗಿದೆ. ಇನ್ನು ಎನ್‌ಡಿಎ ಸಂಸದರ ನಾಯಕರಾಗಿ ಮೋದಿ ಆಯ್ಕೆಯಾದ ಬಳಿಕ ಮೈತ್ರಿಕೂಟದ ಹಿರಿಯ ಸದಸ್ಯರಾದ ಟಿಡಿಪಿಯ ಎನ್ ಚಂದ್ರಬಾಬು ನಾಯ್ಡು ಮತ್ತು ಜೆಡಿಯುನ ನಿತೀಶ್ ಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಮೋದಿಯವರಿಗೆ ಬೆಂಬಲ ನೀಡುವ ಸಂಸದರ ಪಟ್ಟಿಯನ್ನು ಅವರಿಗೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಎನ್‌ಡಿಎ 293 ಸ್ಥಾನಗಳೊಂದಿಗೆ ಬಹುಮತ ಹೊಂದಿದ್ದು, ಸರ್ಕಾರ ರಚನೆ ಕುರಿತು ಸಭೆ ನಡೆಸುತ್ತಿದೆ. ಇನ್ನು ಇದೇ ಭಾನುವಾರ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಈಗಾಗಲೇ ರಾಷ್ಟ್ರಪತಿ ಭವನದಲ್ಲಿ ನೂತನ ಪ್ರಧಾನಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆ ಗಳನ್ನು ಮಾಡಿಕೊಳ್ಳಲಾಗುತ್ತಿದೆ.