ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, 3 ಗಂಟೆ ನಂತರ ಅಧಿಕೃತ ವೆಬ್ಸೈಟ್ನಲ್ಲಿ https://karresults.nic.in ನಲ್ಲಿ ಪರೀಕ್ಷಾ ಮಂಡಳಿ ಫಲಿತಾಂಶವನ್ನು ಪ್ರಕಟಿಸಲಿದೆ. ಜೂನ್ 24 ರಿಂದ ಜುಲೈ 5 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆದಿತ್ತು. ರಾಜ್ಯದ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದ ಈ ಪರೀಕ್ಷೆ ಬರೆಯಲು 44,358 ಬಾಲಕರು, 31,637 ಬಾಲಕಿಯರು ಸೇರಿದಂತೆ ಒಟ್ಟು 75,995 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಮೂರು ಬಾರಿ ಪೂರಕ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಿದೆ.