ಬೆಳಗಾವಿ: ಇಂದು ಅಥವಾ ನಾಳೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, “ಯಾವುದೇ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ, ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ. ಅಧಿಕಾರ ಕೊಟ್ಟಾಗ ನಲವತ್ತು ಪರ್ಸಂಟ್ ಕಮಿಷನ್ ತೆಗೆದುಕೊಂಡು ಮನೆಯಲ್ಲಿ ಕುಳಿತರು” ಎಂದು ಟೀಕಿಸಿದ್ದಾರೆ.
ಇನ್ನೂ ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಲಾಗಿದೆ ಎಂದು ತಿಳಿಸಿದ್ದಾರೆ.
ಮೇ ತಿಂಗಳಲ್ಲಿ ಎಲ್ಲರ ಅಕೌಂಟ್‌ಗೆ ಗೃಹಲಕ್ಷ್ಮಿ ಹಣ ಹೋಗಿದೆ. ಕಾಂಗ್ರೆಸ್ ಪಕ್ಷದ ಸರ್ಕಾರ ಐದು ವರ್ಷ ಕಾರ್ಯಭಾರ ಮಾಡುತ್ತದೆ. ಐದು ವರ್ಷ ಕೂಡ ಗೃಹಲಕ್ಷ್ಮಿ ಮನೆ ಮನೆ ಬಾಗಿಲಿಗೆ ಹೋಗುತ್ತಾಳೆ. ಗೃಹಲಕ್ಷ್ಮಿ ಮುಂದುವರೆಯುತ್ತದೆ. ಯಾರು ಕೂಡ ಆತಂಕಕ್ಕೊಳಗಾಗುವುದು ಬೇಡ ಎಂದು ಹೇಳಿದ್ದಾರೆ