ಇಂದು ಮಳೆ ವರದಿ.! 23 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’

 

 

ಬೆಂಗಳೂರು: ರಾಜ್ಯದಾದ್ಯಂತ ಭಾನುವಾರ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 23 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್  ಹಾಗೂ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.

Advertisement

ಶಿವಮೊಗ್ಗ, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರಿ ಗಾಳಿ ಕಿ.ಮೀ. ಹಾಗೂ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿ ಇನ್ನುಳಿದ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡುಗು ಜಿಲ್ಲೆಗಳಿಗೆ ಇಲಾಖೆ  ಯೆಲ್ಲೊ ಅಲರ್ಟ್ ನೀಡಿದರೆ, ಇನ್ನುಳಿದ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯ ಬಗ್ಗೆಯೂ ಇಲಾಖೆ ಮುನ್ಸೂಚನೆ ನೀಡಿದೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement