ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳು ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ 29ರವರೆಗೂ ರಾಜ್ಯದ ಕೆಲವೆಡೆ ಮಳೆ ಮುಂದುವರಿಯುವ ಸಂಭವವಿದೆ ಎಂದು ಹೇಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮಂಡ್ಯ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಅದೇ ರೀತಿಯಾಗಿ ಉಡುಪಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಕೋಲಾರ, ಶಿವಮೊಗ್ಗ ಹಾಗೂ ರಾಮನಗರ ಜಿಲ್ಲೆಯ ಹಲವೆಡೆ ಗುಡುಗು ಹಾಗೂ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ.