ನವದೆಹಲಿ: ನೂತನ ಸಂಸತ್ ಭವನದಲ್ಲಿ ಸೋಮವಾರದಿಂದ ಹೊಸದಾಗಿ ಆಯ್ಕೆಯಾದ ಸಂಸದರು ಪ್ರಮಾಣವಚನ ಸ್ವೀಕಾರ ಮಾಡಿದ್ದರು. ಇದೀಗ ಇಂದು ಲೋಕಸಭೆಯ ಸ್ಪೀಕರ್ ಚುನಾವಣೆ ನಡೆಯಲಿದ್ದು, ನೂತನ ಸ್ಪೀಕರ್ ಆಯ್ಕೆಯಾಗಲಿದ್ದಾರೆ.
ಲೋಕಸಭೆ ಸ್ಪೀಕರ್ ಚುನಾವಣೆಗೆ ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಕಾಂಗ್ರೆಸ್ ಸಂಸದ ಕೋಡಿಕುನ್ನಿಲ್ ಸುರೇಶ್ (ಕೆ. ಸುರೇಶ್) ನಾಮಪತ್ರ ಸಲ್ಲಿಸಿದ್ದಾರೆ. ಇದೀಗ ಇಂದು ಓಂ ಬಿರ್ಲಾ ಮತ್ತು ಕೆ. ಸುರೇಶ್ ನಡುವೆ ಸ್ಪೀಕರ್ ಸ್ಥಾನಕ್ಕೆ ಸ್ಪರ್ಧೆ ನಡೆಯಲಿದೆ.
ಸ್ಪೀಕರ್ ಆಯ್ಕೆಯ ಕುರಿತು ಎನ್ ಡಿಎ ಮತ್ತು ಇಂಡಿಯಾ ಒಕ್ಕೂಟದ ನಡುವಿನ ಮಾತುಕತೆ ಯಶಸ್ವಿಯಾಗಿರಲಿಲ್ಲ. ಈ ಹಿನ್ನೆಲೆ, ಚುನಾವಣೆ ಮೂಲಕ ಸ್ಪೀಕರ್ ಆಯ್ಕೆ ಮಾಡಲು ನಿರ್ಧರಿಸಲಾಗಿತ್ತು. ಇನ್ನು ಲೋಕಸಭೆಯಲ್ಲಿ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವುದು ಇದೇ ಮೊದಲ ಬಾರಿಯಾಗಿದೆ.