ಇಂದು ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ.!

 

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ಇಂದು ಸಹ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಭಾನುವಾರ ಗಾಳಿಯು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಸೂಚನೆ ನೀಡಿದೆ.

Advertisement

ಏಪ್ರಿಲ್ 15 ಹಾಗೂ 16ರಂದು ರಾಜ್ಯದಾದ್ಯಂತ ಒಣಹವೆ ಇರಲಿದೆ. ಏಪ್ರಿಲ್ 17ರಂದು ದಕ್ಷಿಣ ಕನ್ನಡ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸೇರಿದಂತೆ 22 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement