ಹುಬ್ಬಳ್ಳಿ: ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ (ಸೆ.16) ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ.
ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲು ಎರಡು ವಾಣಿಜ್ಯ ಮಹಾನಗರಗಳನ್ನು ಸಂಪರ್ಕಿಸುವ ಕೊಂಡಿಯಾಗಿದೆ. ಇದು ಕರ್ನಾಟಕದ 10ನೇ ವಂದೇ ಭಾರತ್ ರೈಲಾಗಿದೆ. ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಮಯ, ಯಾವ್ಯಾವ ದಿನದಂದು ಸಂಚರಿಸಲಿದೆ ಎಂಬ ಮಾಹಿತಿ ಇಲ್ಲಿದೆ.
ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಕೇವಲ 8.5 ಗಂಟೆಗಳಲ್ಲಿ 557 ಕಿಮೀ ಕ್ರಮಿಸುತ್ತದೆ. ಇತರ ರೈಲುಗಳಿಗೆ ಹೋಲಿಸಿದರೆ ಸುಮಾರು 3 ಗಂಟೆಗಳ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಈ ರೈಲು ವಾರದಲ್ಲಿ ಮೂರು ದಿನ ಮಾತ್ರ ಸಂಚರಿಸುತ್ತದೆ
ಹುಬ್ಬಳ್ಳಿಯಿಂದ ಬುಧವಾರ, ಶುಕ್ರವಾರ ಮತ್ತು ಭಾನುವಾರ ಹೊರಟು ಅದೇ ದಿನ ಪುಣೆ ತಲುಪುತ್ತದೆ. ಪುಣೆಯಿಂದ ಗುರುವಾರ, ಶನಿವಾರ ಮತ್ತು ಸೋಮವಾರ ಹೊರಟು ಹುಬ್ಬಳ್ಳಿ ತಲಪುತ್ತದೆ. ಈ ರೈಲು ಒಟ್ಟು 8 ಬೋಗಿಗಳೊಂದಿಗೆ ಸಂಚರಿಸಲಿದ್ದು, 52 ಎಕ್ಸಿಕ್ಯೂಟಿವ್ ಕ್ಲಾಸ್ ಸೀಟ್ಗಳು ಮತ್ತು 478 ಚೇರ್ ಕಾರ್ ಸೀಟುಗಳು ಇರಲಿವೆ. ಒಟ್ಟು 530 ಆಸನಗಳನ್ನು ಹೊಂದಿದೆ.