ದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮಹತ್ವದ ಪ್ರಕಟಣೆ ಹೊರಡಿಸಿದೆ. ಪೇಟಿಎಂ ಫಾಸ್ಟ್‌ಟ್ಯಾಗ್ ಅನ್ನು ಬಳಸುವ ಎಲ್ಲರಿಗೂ ಇತರ ಬ್ಯಾಂಕ್‌ಗಳಿಂದ ಹೊಸ ಫಾಸ್ಟ್‌ಟ್ಯಾಗ್ ಅನ್ನು ಪಡೆಯಲು ಅದು ಸೂಚಿಸಿದೆ.
ಇಲ್ಲದಿದ್ದರೆ, ಹೆದ್ದಾರಿಗಳಲ್ಲಿ ಹೋಗುವ ವಾಹನ ಚಾಲಕರು ದಂಡ ಮತ್ತು ಹೆಚ್ಚುವರಿ ಶುಲ್ಕವನ್ನು ಭರಿಸಬೇಕಾಗುತ್ತದೆ ಎಂದು ಹೇಳಿದೆ.
ಮಾರ್ಚ್ 15ರಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸೇವೆಗಳು ಸ್ಥಗಿತಗೊಳ್ಳಲಿವೆ ಎಂಬುದು ಗೊತ್ತೇ ಇದೆ.