ಮುಂಬೈ: ವಿಲಾಸಿ ಹಡಗಿನಲ್ಲಿ ಮಾದಕ ವಸ್ತು ಪತ್ತೆಯಾದ ಪ್ರಕರಣದಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಬಂಧನಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಜಾರಿ ನಿರ್ದೇಶನಾಲಯ ಹೂಡಿದ್ದ ಪ್ರಕರಣ ರದ್ದುಗೊಳಿಸುವಂತೆ ಕೋರಿ ಎನ್ಸಿಬಿ ಹಿರಿಯ ಅಧಿಕಾರಿಯಾಗಿದ್ದ ಸಮೀರ್ ವಾಂಖೆಡೆ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಅಕ್ಟೋಬರ್ 2, 2021 ರಂದು ಮುಂಬೈ-ಗೋವಾ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ತಮ್ಮ ಪುತ್ರ ಆರ್ಯನ್ ಖಾನ್ ಅವರನ್ನು ಬಂಧಿಸದಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರಿಂದ ₹25 ಕೋಟಿ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ವಾಂಖೆಡೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ನಂತರ ಇಡಿ ಅವರ ವಿರುದ್ಧ ಕ್ರಮ ಕೈಗೊಂಡಿದೆ.
ಫೆ.15 ರಂದು ನ್ಯಾಯಮೂರ್ತಿಗಳಾದ ಪಿ.ಡಿ.ನಾಯ್ಕ್ ಮತ್ತು ಎನ್.ಆರ್.ಬೋರ್ಕರ್ ಅವರ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸುವ ಸಾಧ್ಯತೆಯಿದೆ .