ಇದೇ ನೋಡಿ ರಾಜ್ಯದಲ್ಲೇ ಅತೀ ಎತ್ತರದ ಗಣೇಶ ; ಹುಬ್ಬಳ್ಳಿ ಕಾ ಮಹರಾಜ್

ಹುಬ್ಬಳ್ಳಿ: ಕರ್ನಾಟಕದಲ್ಲಿಯೇ ಹುಬ್ಬಳ್ಳಿಯ ಗಣೇಶೋತ್ಸವವು ಸಾಕಷ್ಟು ಪ್ರಸಿದ್ದಿಯನ್ನು ಪಡೆದುಕೊಂಡಿದ್ದು ರಾಜ್ಯದಲ್ಲೇ ಅತ್ಯಂತ ಎತ್ತರವಾದ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗುತ್ತದೆ. ದಾಜೀಬಾನಪೇಟ,‌‌ ಮರಾಠಾಗಲ್ಲಿಯಲ್ಲಿ 21 ಅಡಿಗೂ ಎತ್ತರವಾದ ಗಣೇಶ ವಿಗ್ರಹವನ್ನು ಇರಿಸಲಾಗುತ್ತದೆ. ಇದು 25 ಅಡಿ ಎತ್ತರವಿದ್ದು , ಸುಮಾರು 5ಟನ್ ಗೂ ಅಧಿಕ ತೂಕ ಹೊಂದಿದೆ. ಕರ್ನಾಟಕದಲ್ಲಿಯೇ ಅತಿ ಎತ್ತರದ ಮೂರ್ತಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಕಳೆದ 42 ವರ್ಷಗಳಿಂದ ಮೂರ್ತಿ ಪ್ರತಿಷ್ಠಾಪನೆ ಮಾಡಿಕೊಂಡು ಬರಲಾಗುತ್ತಿದೆ. ಮೊದಲು ಇಲ್ಲಿ ಚಿಕ್ಕದಾದ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿತ್ತು. ನಂತರದ ವರ್ಷಗಳಲ್ಲಿ ಧರ್ಮಸ್ಥಳ ಮಂಜುನಾಥ, ಶಬರಿಮಲೆಯ ಅಯ್ಯಪ್ಪಸ್ವಾಮಿ ಮಂದಿರ, ಅಷ್ಟವಿನಾಯಕ ಮಂದಿರಗಳು, 65 ಅಡಿ ಎತ್ತರದ ಅಮೆರಿಕ ಟಾವರ್, ಅಜಂತಾ ಎಲ್ಲೋರಾ ಗುಹೆ, ಬರ್ನಿಂಗ್ ಟ್ರೇನ್ ಸೇರಿದಂತೆ ಹಲವು ರೂಪಕಗಳನ್ನು ಪ್ರದರ್ಶನದ ವ್ಯವಸ್ಥೆ ಮಾಡಲಾಗಿತ್ತು.ಗಣೇಶ ಚತುರ್ಥಿ ಹಬ್ಬದ ನಾಲೈದು ತಿಂಗಳು ಮೊದಲೇ ಕೋಲ್ಕತ್ತಾದಿಂದ ಆಗಮಿಸುವ ಅಪ್ಪು ಪಾಲ್ ನೇತೃತ್ವದ 25 ಮೂರ್ತಿ ತಯಾರಕರ ತಂಡವು ಇದಕ್ಕೆ ಬೇಕಾಗುವ ಮಣ್ಣನ್ನು ಕೋಲ್ಕತ್ತಾ (ಗಂಗಾನದಿಯ)ದಿಂದ ಹುಬ್ಬಳ್ಳಿಗೆ ತಂದು ಮೂರ್ತಿ ತಯಾರಿಸುವುದು ವಿಶೇಷ.


ಕಳೆದ 20 ವರ್ಷಗಳಿಂದ 25 ಅಡಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿಕೊಂಡು ಬರಲಾಗುತ್ತಿದೆ. ಈ ಮೂರ್ತಿಗೆ 25 ಕೆಜಿಗೂ ಅಧಿಕ ಬೆಳ್ಳಿಯ ಆಭರಣ ಹಾಕಲಾಗುತ್ತದೆ. ಮೂರ್ತಿಯ ಹಸ್ತ, ಪಾದುಕೆ, ಕೊರಳಲ್ಲಿರುವ ಬೃಹತ್ ಮಾಲೆ, ಮೋದಕ, ಕಿವಿಯೋಲೆಗಳನ್ನು ಸಂಪೂರ್ಣವಾಗಿ ಬೆಳ್ಳಿಯಿಂದ ತಯಾರಿಸಲಾಗುತ್ತದೆ. ಉಂಗುರ, ದಂತ, ತ್ರಿಶೂಲಕ್ಕೆ 70 ಗ್ರಾಂಗೂ ಅಧಿಕ ಬಂಗಾರ ಬಳಕೆ ಮಾಡಲಾಗಿದೆ. ಮೂರ್ತಿಯ ದೋತ್ರ (ಪಂಚೆ)ಕ್ಕೆ 25 ಮೀಟರ್ ಗಾತ್ರದ ಬಟ್ಟೆ ಬಳಕೆ ಮಾಡಿರುವುದು ಮತ್ತೊಂದು ವಿಶೇಷವಾಗಿದೆ.

Advertisement


ಮತ್ತೊಂದೆಡೆ ದಾಜೀಬಾನಪೇಟದಲ್ಲಿ 49 ವರ್ಷಗಳಿಂದ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿದೆ. ಇಲ್ಲಿಯೂ ಕೂಡ ಕಳೆದ 18 ವರ್ಷಗಳಿಂದ 20 ಅಡಿಗೂ ಎತ್ತರವಾದ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಈ ವರ್ಷ 24 ಅಡಿಯ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಸಂಪೂರ್ಣ ಮಣ್ಣಿನಿಂದ ತಯಾರಿಸಿರುವ ಪರಿಸರ ಸ್ನೇಹಿಯಾಗಿದೆ. ಗಣಪನಿಗೆ 25 ಕೆಜಿ ಬೆಳ್ಳಿಯಿಂದ ಅಲಂಕರಿಸಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement