ಮೈಸೂರು: ಬಿಎಂಡಬ್ಲ್ಯು ಕಾರು ಹೊತ್ತಿ ಉರಿದ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಟೋಲ್ ಪ್ಲಾಜಾ ಬಳಿ ನಡೆದಿದೆ.
ಮೈಸೂರು ದಕ್ಷಿಣ ಠಾಣೆ ಪೊಲೀಸರು ಹೇಳುವ ಪ್ರಕಾರ, ಬಿಎಂಡಬ್ಲ್ಯು ಕಾರಿನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನೋಡ ನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ.
ಟೋಲ್‌ಗೇಟ್ ಬಳಿ ಕಾರು ಚಾಲಕ ಕಾರನ್ನು ನಿಲ್ಲಿಸಿದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಅದೃಷ್ಟವಶತ್ ಯಾವುದೇ ಅಪಾಯ ಸಂಭವಿಸಿಲ್ಲ. ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ ಎಂದು ತಿಳಿಸಿದ್ದಾರೆ.
ಮೈಸೂರಿನ ಕುಟುಂಬವೊಂದು ನಂಜನಗೂಡಿನಿಂದ ವಾಪಸ್ಸಾಗುತ್ತಿದ್ದ ವೇಳೆ ಭಾನುವಾರ ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದೆ.
ಇನ್ನು ಆಕಸ್ಮಿಕ ಬೆಂಕಿ ಘಟನೆಯಲ್ಲಿ ವಾಹನ ಜಖಂಗೊಂಡಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿಗೆ ಬೆಂಕಿ ಹೇಗೆ ತಗುಲಿತು ಎನ್ನುವ ಕುರಿತಾಗಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.