ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕೃತ ಪ್ರಕಟಣೆಯನ್ವಯ ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ಕಾರ್ಡನಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ಸೂಚನೆ ನೀಡಲಾಗಿದೆ.
ಇ-ಕೆವೈಸಿ ಏಕೆ ಮಾಡಿಸಬೇಕು?
1) ನೈಜ ಫಲಾನುಭವಿಗಳಿಗೆಯೇ ಪ್ರತಿ ತಿಂಗಳು ಆಹಾರ ಧಾನ್ಯ ತಲುಪುತ್ತಿರುವುದನ್ನು ಖಚಿತಪಡಿಸಿಕೊಳ್ಳಲು.
2) ನಕಲಿ ರೇಷನ್ ಕಾರ್ಡದಾರರನ್ನು ಖಚಿತಪಡಿಸಿಕೊಳ್ಳಲು ಇ-ಕೆವೈಸಿ ಮಾಡಿಸಲು ಸೂಚಿಸಲಾಗಿದೆ.
3) ರೇಶನ್ ಕಾರ್ಡನಲ್ಲಿ ಮರಣ ಹೊಂದಿದ ಸದಸ್ಯರನ್ನು ಗುರುತಿಸಿ ಅಂತಹ ಸದಸ್ಯರನ್ನು ಕಾರ್ಡನಿಂದ ತೆಗೆದು ಹಾಕಲು.
ರೇಷನ್ ಕಾರ್ಡ ಇ-ಕೆವೈಸಿ ಅನ್ನು ಎಲ್ಲಿ ಮಾಡಿಸಬೇಕು?
ರೇಶನ್ ಕಾರ್ಡ ನಲ್ಲಿರುವ ಸದಸ್ಯರು ಖುದ್ದು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯನ್ನು ರೇಶನ್ ಕಾರ್ಡನಲ್ಲಿರುವ ಮೊಬೈಲ್ ಸಂಖ್ಯೆಯ ಸಮೇತ ಕಚೇರಿ ವೇಳೆಯಲ್ಲಿ ಭೇಟಿ ಮಾಡಿ ಇ-ಕೆವೈಸಿ ಅನ್ನು ಮಾಡಿಕೊಳ್ಳಬೇಕು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸೂಚನೆಯ ಪ್ರಕಾರ 31 ಆಗಸ್ಟ್ 2024 ರ ಒಳಗಾಗಿ ಪಡಿತರ ಚೀಟಿ ಹೊಂದಿರುವ ಗ್ರಾಹಕರು ನ್ಯಾಯಬೆಲೆ ಅಂಗಡಿಯನ್ನು ಭೇಟಿ ಮಾಡಿ ಇ-ಕೆವೈಸಿ ಮಾಡಿಸಲು ಸೂಚನೆ ನೀಡಲಾಗಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.