ಬೆಂಗಳೂರು : ಇನ್ನು ಮುಂದೆ ರಾಜ್ಯದ ಎಲ್ಲಾ ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಳ್ಳಾರಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ನಗರಾಭಿವೃದ್ಧಿ ಇಲಾಖೆ ಸಮ್ಮತಿಸಿದೆ. ಸೆ.23 ರಿಂದ ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಿ, ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದಲೇ ಪಡೆಯಬೇಕು. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಇ-ಆಸ್ತಿ ತಂತ್ರಾಂಶದಿಂದ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯುವುದು. ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ