ಹೆಣ್ಣುಮಕ್ಕಳ ಮದುವೆ ವಯಸ್ಸು 18ರಿಂದ 21ಕ್ಕೆ ವರ್ಷಕ್ಕೆ ಹೆಚ್ಚಿಸುವ ಮಸೂದೆಯನ್ನು ಹಿಮಾಚಲ ಪ್ರದೇಶದ ವಿಧಾನಸಭೆ ಅಂಗೀಕರಿಸಿದೆ. ಹಿಮಾಚಲ ಪ್ರದೇಶ ಬಾಲ್ಯ ವಿವಾಹ ನಿಷೇಧ ಮಸೂದೆ-2024 ಅನ್ನು ಮಂಗಳವಾರ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು. ತಿದ್ದುಪಡಿಯು ಹೆಣ್ಣುಮಕ್ಕಳ ಕಾನೂನುಬದ್ಧ ವಿವಾಹ ವಯಸ್ಸನ್ನು ಮೂರು ವರ್ಷಗಳವರೆಗೆ ಹೆಚ್ಚಿಸುತ್ತದೆ. ಇದೀಗ ಅಂತಿಮ ಅನುಮೋದನೆಗಾಗಿ ಮಸೂದೆಯನ್ನು ರಾಜ್ಯಪಾಲರಿಗೆ ರವಾನಿಸಲಾಗಿದೆ. ಲಿಂಗ ಸಮಾನತೆಯನ್ನು ಒದಗಿಸಲು ಹೆಣ್ಣುಮಕ್ಕಳ ಕನಿಷ್ಠ ವಿವಾಹದ ವಯಸ್ಸನ್ನು ಹೆಚ್ಚಿಸುವುದು ಅಗತ್ಯವಾಗಿದೆ ಎಂದು ಸಚಿವ ಧನಿ ರಾಮ್ ಹೇಳಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.