ಭೋಪಾಲ್: ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಇಬ್ಬರು ಪತ್ನಿಯರು ಇರುವ ಪುರುಷರಿಗೆ 2 ಲಕ್ಷ ರೂ. ಸಿಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಕಾಂತಿಲಾಲ್ ಭುರಿಯಾ ತಿಳಿಸಿದ್ದಾರೆ.
ಮಧ್ಯಪ್ರದೇಶದ ರತ್ಲಂ ಕ್ಷೇತ್ರದ ಅಭ್ಯರ್ಥಿಯಾಗಿರುವ ಭುರಿಯಾ, 2024 ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಲಾದ ‘ಮಹಾಲಕ್ಷ್ಮಿ ಯೋಜನೆ’ ಕುರಿತು ಮಾತನಾಡಿ, ಈ ಯೋಜನೆಯಡಿ ಪ್ರತಿ ಬಡ ಕುಟುಂಬದ ಮನೆಯಲ್ಲಿ ಒಬ್ಬ ಮಹಿಳೆಗೆ ವಾರ್ಷಿಕ 1 ಲಕ್ಷ ರೂ. ಸಿಗುತ್ತದೆ
ಮಹಾಲಕ್ಷ್ಮಿ ಯೋಜನೆಯಡಿ, ಕಾಂಗ್ರೆಸ್ ಪ್ರತಿ ಬಡ ಕುಟುಂಬಕ್ಕೆ ವರ್ಷಕ್ಕೆ 1 ಲಕ್ಷ ರೂ. ನೀಡುತ್ತದೆ. ಹಣವನ್ನು ನೇರವಾಗಿ ಕುಟುಂಬದ ಹಿರಿಯ ಮಹಿಳೆಯ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಆಕೆಯ ಅನುಪಸ್ಥಿತಿಯ ಅದನ್ನು ಕುಟುಂಬದ ಹಿರಿಯ ಸದಸ್ಯರ ಖಾತೆಗೆ ವರ್ಗಾಯಿಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಗೆ ಬಿಜೆಪಿ ಕಿಡಿಕಾರಿದೆ. ಇದು ಆಕ್ಷೇಪಾರ್ಹ ಹೇಳಿಕೆ. ಸೂಕ್ತ ಕ್ರಮಕೈಗೊಳ್ಳುವಂತೆ ಭಾರತದ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.