ನವದೆಹಲಿ: ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವಿನ ಕಾಳಗ ಮತ್ತಷ್ಟು ತಾರಕ್ಕೇರಿದ್ದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಮನೆ ಮೇಲೆ ಹಿಜ್ಬುಲ್ಲಾ ಮತ್ತೊಮ್ಮೆ ದಾಳಿ ನಡೆಸಿದೆ.
ಕೈಸ್ರಾದಲ್ಲಿರುವ ನೆತನ್ಯಾಹು ಅವರ ನಿವಾಸದ ಬಳಿ ಎರಡು ರಾಕೆಟ್‌ಗಳು ಬಿದ್ದಿದ್ದು, ದಾಳಿ ಸಮಯದಲ್ಲಿ ನೆತನ್ಯಾಹು ಅಥವಾ ಅವರ ಕುಟುಂಬವು ನಿವಾಸದಲ್ಲಿ ಇರಲಿಲ್ಲ. ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್, ಎಲ್ಲ ಮಿತಿಗಳನ್ನು ಮೀರಿದ ಕೃತ್ಯವಿದು. ಇದನ್ನು ಸಹಿಸಲಾಗದು ಎಂದು ಹೇಳಿದ್ದಾರೆ.
ಇಸ್ರೇಲಿ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಸಾರ್ವಜನಿಕ ವಲಯದಲ್ಲಿ ಹಿಂಸಾಚಾರ ಹೆಚ್ಚಳವಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ, ಇಂತಹ ಕೃತ್ಯ ಮುಂದುವರಿದರೆ ಸುಮ್ಮನಿರೋದಿಲ್ಲ ವಿರುದ್ಧ ವಿರೋಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.