ಕೋಲ್ಕತ್ತಾ: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿರುವ ಡ್ರೆಸ್ಸಿಂಗ್ ರೂಮ್‌ನಲ್ಲಿ ಭಾರೀ ಅವಘಡವೊಂದು ಸಂಭವಿಸಿದೆ.
ಬುಧವಾರ ತಡರಾತ್ರಿ ಕ್ರೀಡಾಂಗಣದ ಡ್ರೆಸ್ಸಿಂಗ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸಾಕಷ್ಟು ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಕಿ ಅವಘಢದಿಂದಾಗಿ ಡ್ರೆಸ್ಸಿಂಗ್ ರೂಂನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದ್ದು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಒಂದು ಗಂಟೆ ಶ್ರಮವಹಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಅಕ್ಟೋಬರ್ ನಲ್ಲಿ ನಡೆಯಬೇಕಿದ್ದ ವಿಶ್ವ ಕಪ್ ಪಂದ್ಯಾಟಕ್ಕೆ ಸಜ್ಜುಗೊಳ್ಳಬೇಕಾಗಿದ್ದ ಕ್ರೀಡಾಂಗಣದ ನವೀಕರಣ ಕಾರ್ಯ ನಡೆಯುತ್ತಿತ್ತು ಎನ್ನಲಾಗಿದ್ದು, ಈ ನಡುವೆ ಅಗ್ನಿ ಅವಘಡ ಸಂಭವಿಸಿದೆ.