ಚಿತ್ರದುರ್ಗ: ಕೈಮಗ್ಗ ಮತ್ತು ಜವಳಿ ಇಲಾಖೆಯು ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರುಗಳಿಗೆ ಹಾಗೂ ಕೈಮಗ್ಗ ನೇಕಾರರಿಗೆ ಸಂಬAಧಿಸಿದ ಇತರೆ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರಿಗೆ ವಾರ್ಷಿಕ ರೂ.5000/- ಗಳನ್ನು ನೀಡಲು ನೇಕಾರರ ಸಮ್ಮಾನ್ ಯೋಜನೆಯಡಿ 2024-25ನೇ ಸಾಲಿಗೆ ಈಗಾಗಲೇ ನೊಂದಾಯಿತವಾಗಿರುವ ಅರ್ಹ ಕೈಮಗ್ಗ, ವಿದ್ಯುತ್ ಮಗ್ಗ ನೇಕಾರರಿಂದ ಹೊಸದಾಗಿ ಅರ್ಜಿ ಪಡೆದು ಅರ್ಹವಿರುವ ನೇಕಾರರ ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲು ಕೇಂದ್ರ ಕಚೇರಿ ಪತ್ರದಲ್ಲಿ ಸೂಚಿಸಲಾಗಿದೆ.
ಅದರಂತೆ 2023-24ನೇ ಸಾಲಿನಲ್ಲಿ ಈ ಯೋಜನೆಯಡಿ ಈಗಾಗಲೇ ಸೌಲಭ್ಯ ಪಡೆದಿರುವ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಪಟ್ಟಿಯಲ್ಲಿ ನೊಂದಾಯಿತ ಕೈಮಗ್ಗ ನೇಯ್ಗೆ, ವಿದ್ಯುತ್ ಮಗ್ಗ ನೇಯ್ಗೆ ಚಟುವಟಿಕೆಯಲ್ಲಿ ತೊಡಗಿರುವ ಅರ್ಹ ನೇಕಾರರಿಂದ, ಸ್ಥಳೀಯ ಕೈಮಗ್ಗ ಅಭಿವೃದ್ಧಿ ನಿಗಮ, ನೇಕಾರ ಸಹಕಾರ ಸಂಘಗಳ ಮೂಲಕ ಅರ್ಜಿ ಪಡೆಯಲಾಗುತ್ತಿದೆ.
ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ನೊಂದಿಗೆ ನಿಗಮ, ನೇಕಾರ ಸಹಕಾರ ಸಂಘ, ಸಂಸ್ಥೆಗಳ ಮೂಲಕ ಅಥವಾ ನೇರವಾಗಿ ಅಕ್ಟೋಬರ್ 20ರೊಳಗಾಗಿ ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಬಿ.ಡಿ.ರಸ್ತೆ, ಯುನಿಯನ್ ಪಾರ್ಕ್ ಹತ್ತಿರ, ಮಸೀದಿ ಪಕ್ಕ, ಚಿತ್ರದುರ್ಗ ಕಚೇರಿಗೆ ಸಲ್ಲಿಸಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.