ಬೆಂಗಳೂರು: ಆನ್‌ಲೈನ್ ಗೇಮಿಂಗ್ ಲೋಕಕ್ಕೆ ಜಾರಿ ನಿರ್ದೇಶನಾಲಯ ಬಿಗ್ ಶಾಕ್ ನೀಡಿದೆ. ಬೆಂಗಳೂರು ಸೇರಿದಂತೆ ದೇಶದ ಒಟ್ಟು 16 ಕಡೆಗಳಲ್ಲಿ ಏಕಕಾಲಕ್ಕೆ ED ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತೆರಿಗೆ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನ ಪ್ರಮುಖ ಗೇಮಿಂಗ್ ಕಂಪನಿಯಾದ ಗೇಮ್ಸ್ಕ್ರಾಫ್ಟ್ ಕಚೇರಿಯ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿ ತಪಾಸಣೆ ನಡೆಸುತ್ತಿದೆ. ಈ ಕಂಪನಿ ರಮ್ಮಿ ಕಲ್ಟರ್ ಎಂಬ ಆಪ್ ಅನ್ನು ನಡೆಸುತ್ತಿದೆ.




























