ಬೆಂಗಳೂರು: ನಾಯಿಗಳ ಕುರಿತಾಗಿ ಅವಹೇಳನ ಮಾಡಿದ ಆರೋಪದ ಮೇಲೆ ‘ಬಿಗ್ ಬಾಸ್’ ರಿಯಾಲಿಟಿ ಶೋ ಸ್ಪರ್ಧಿ ಡಾಗ್ ಸತೀಶ್ ಸೇರಿದಂತೆ ಇಬ್ಬರ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯೂಟ್ಯೂಬ್ ಚಾನೆಲ್ ವೊಂದರ ಸಂದರ್ಶನದಲ್ಲಿ ನಾಯಿಗಳ ಕುರಿತಾಗಿ ಡಾಗ್ ಸತೀಶ್ ಅವಹೇಳನ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿತ್ತು. ಈ ವಿವಾದಕ್ಕೆ ಸಂಬಂಧಿಸಿದಂತೆ ಪ್ರಾಣಿ ದಯಾ ಸಂಘಟನೆಯ ಕಾರ್ಯಕರ್ತರು ದೂರು ನೀಡಿದ್ದು, ಡಾಗ್ ಸತೀಶ್ ಹಾಗೂ ಯೂಟ್ಯೂಬರ್ ಸುಭಾಷ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.
































