ಚಿತ್ರದುರ್ಗ: ಅಂತ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆ.15 ರಂದು ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಹಿರಿಯೂರು ಮಾರ್ಗದಲ್ಲಿ ಸು.140 ಕಿ.ಮೀ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸ್ವ-ಸಹಾಯ ಸಂಘಗಳ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.
ಮಾನವ ಸರಪಳಿ ರಚನೆಯನ್ನು ಮೊಳಕಾಲ್ಮೂರು ತಾಲ್ಲೂಕಿನ ತಮ್ಮೇನಹಳ್ಳಿ ಗೇಟ್‌ನಿಂದ, ಹಿರಿಯೂರು ನಗರದ ಟಿ.ಬಿ.ವೃತ್ತದವರಗೆ ಹಾದು ಹೊಗಿರುವ ರಾಷ್ಟಿçÃಯ ಹೆದ್ದಾರಿ 150(ಎ) ಹಾಗೂ ಹಿರಿಯೂರು ನಗರದ ಟಿ.ಬಿ ವೃತ್ತದಿಂದ ಜೆ.ಜೆ.ಹಳ್ಳಿ ಬಾರ್ಡರ್ ವರೆಗೆ ಹಾದು ಹೋಗಿರುವ ರಾಷ್ಟಿçÃಯ ಹೆದ್ದಾರಿ 48 ರಸ್ತೆಗಳ ಎಡಭಾಗದಲ್ಲಿ ನಿರ್ಮಾಣ ಮಾಡಲಾಗುವುದು.
ಈ ಕಾರಣದಿಂದ ಸಾರ್ವಜನಿಕರ ಸುರಕ್ಷತೆ, ವಾಹನ ಸುಗಮ ಸಂಚಾರದ ದೃಷ್ಠಿಯಿಂದ ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಹಿರಿಯೂರು ಮಾರ್ಗದ ಮೂಲಕ ಹಾದು ಹೋಗಿರುವ ರಾಷ್ಟಿçÃಯ ಹೆದ್ದಾರಿಗಳಲ್ಲಿ ಸೆ.15 ರಂದು ಬೆಳಿಗ್ಗೆ 7 ಗಂಟೆಯಿAದ ಮಧ್ಯಾಹ್ನ 12 ಗಂಟೆಗಯವರೆಗೆ ಎಡ ಭಾಗದಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.