ದೆಹಲಿ: ಸಾಮಾಜಿಕ ಮಾಧ್ಯಮ ಕಂಪನಿಗಳಾದ X, ಯೂಟ್ಯೂಬ್ ಹಾಗೂ ಟೆಲಿಗ್ರಾಮ್‌ಗೆ ಭಾರತೀಯ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ನೋಟಿಸ್ ನೀಡಿದೆ.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯವನ್ನು ತೆಗೆದುಹಾಕಲು ಸೂಚಿಸಿದೆ. ತನ್ನ ಪ್ಲಾಟ್‌ಫಾರ್ಮ್‌ಗಳಲ್ಲಿ ಕ್ರಿಮಿನಲ್ ಮತ್ತು ದುರುದ್ದೇಶಪೂರಿತ ಪೋಸ್ಟ್‌ಗಳನ್ನು ಅನುಮತಿಸಬೇಡಿ ಎಂದು ಅದು ಹೇಳಿದೆ. ಇದಕ್ಕೆ ಸಂಬಂಧಪಟ್ಟ ಸಂಸ್ಥೆಗಳು ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ, ಐಟಿ ಕಾಯ್ದೆಯ ಸೆಕ್ಷನ್ 79ರಿಂದ ಆ ಸಂಸ್ಥೆಗಳು ಭದ್ರತೆ ಕಳೆದುಕೊಳ್ಳಲಿವೆ ಎಂದು ಎಚ್ಚರಿಸಿದೆ.!