ಬೆಂಗಳೂರು: ಇನ್ಮುಂದೆ ಈ ಖಾಯಲೆಗಳಾದ ಪಾರ್ಶ್ವವಾಯು ಮತ್ತು ಹೃದಯಾ ಘಾತಕ್ಕೆ ಒಳಗಾದವರನ್ನು ಪ್ರಾಣಾಪಾಯದಿಂದ ಪಾರು ಮಾಡಲು ಬೇಕಾಗಿರುವ ಅಗತ್ಯವಾದ ದುಬಾರಿ ಬೆಲೆಯ ಚುಚ್ಚುಮದ್ದುಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ದೊರೆಯಲಿವೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ಇದೇ ವೇಳೆ ಅವರು ಪಾರ್ಶ್ವವಾಯು ನಿರ್ವಹಣೆಗೆ ಅಗತ್ಯವಿರುವ 60 ಸಾವಿರ ರೂ. ದರದ ಆರ್‌ಟಿ ಪ್ಲಸ್ ಚುಚ್ಚುಮದ್ದು, ಹೃದಯಾಘಾತ ನಿರ್ವಹಣೆಗೆ 40 ಸಾವಿರ ರೂ. ಬೆಲೆಯ ಟೆನೆಕ್ಟ್ ಪ್ಲಸ್ ಚುಚ್ಚುಮದ್ದುಗಳು ತಾಲ್ಲೂಕು ಆಸ್ಪತ್ರೆಗಳಿಗೆ ಶೀಘ್ರವೇ ಪೂರೈಕೆಯಾಗಲಿವೆ.
ಈ ಚುಚ್ಚುಮದ್ದುಗಳು ಸರ್ಕಾರಿ ವ್ಯವಸ್ಥೆಯಡಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್), ಜಯದೇವ ಹೃದ್ರೋಗ ಸಂಸ್ಥೆ ಹೊರತುಪಡಿಸಿದರೆ ಬೇರೆ ಸರ್ಕಾರಿ ಆಸ್ಪತ್ರೆಗಳಲ್ಲಿ ದೊರೆಯುತ್ತಿರಲಿಲ್ಲ. ಇದರಿಂದ ತುರ್ತು ಸಂದರ್ಭದಲ್ಲಿ ಈ ಚುಚ್ಚುಮದ್ದುಗಳಿಗೆ ಖಾಸಗಿ ಆಸ್ಪತ್ರೆಗಳನ್ನೇ ಅವಲಂಬಿಸಬೇಕಾಗಿತ್ತು. ಆದರೆ ಈಗ ಈ ಚುಚ್ಚುಮದ್ದನ್ನು ತಾಲ್ಲೂಕು ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗುತ್ತದೆ.