ರಾಜ್ಯದ ಎಲ್ಲಾ ಜಿಲ್ಲೆಯ ಅರ್ಹ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಜಮಾ ಮಾಡಲಾಗುತ್ತಿದ್ದು ಪ್ರಸ್ತುತ ಮೊದಲ ಹಂತದಲ್ಲಿ ಬೆಳಗಾವಿ, ಕಲಬುರಗಿ, ಬೀದರ್, ವಿಜಯಪುರ, ಬಳ್ಳಾರಿ, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ 533 ಕೋಟಿ ರೂ. ಪಾವತಿ ಮಾಡಲಾಗಿರುತ್ತದೆ.
ಉಳಿದ ಜಿಲ್ಲೆಯ ಫಲಾನುಭವಿಗಳಿಗೆ ಎರಡನೇ ಹಂತ ಅಂದರೆ ಇನ್ನೊಂದರೆಡು ದಿನಗಳ ಒಳಗಾಗಿ ಎಲ್ಲಾ ಜಿಲ್ಲೆಯ ಅರ್ಜಿದಾರರಿಗೆ ಈ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿದ್ದ ರೂ 2,000 ಅರ್ಥಿಕ ನೆರವು ಜಮಾ ಅಗಲಿದೆ ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.
ತಾಂತ್ರಿಕ-ಚುನಾವಣೆ ಕಾರಣ ಹಣ ವರ್ಗಾವಣೆ ಮಾಡಲು ವಿಳಂಬ: ಸಚಿವೆ ಲಕ್ಷ್ಮೀ ಹೆಬ್ಬಾಳರ್
ಮಂಗಳವಾರ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ‘ತಾಂತ್ರಿಕ ಕಾರಣಗಳಿಂದ ಎರಡು-ಮೂರು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿದ ರೂ 2,000 ಹಣ ಫಲಾನುಭವಿಗಳ ಖಾತೆಗೆ ಅಂದರೆ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಜಮೆ ಆಗಿರಲಿಲ್ಲ. 6 ಆಗಸ್ಟ್ 2024 ರಿಂದಲೇ ಜೂನ್, ಜುಲೈ ತಿಂಗಳ ಗೃಹಲಕ್ಷ್ಮೀ ಹಣ ವರ್ಗಾವಣೆ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.