.
ಬೆಂಗಳೂರು 9 ಕ್ಷೇತ್ರಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಒಂಬತ್ತು ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ ರೂ.25 ಕೋಟಿಗಳ ಭರ್ಜರಿ ಅನುದಾನ ನೀಡಲು ಅನುಮೋದನೆ ಸಿಕ್ಕಿದೆ.
ಶಿವಾಜಿನಗರ, ಗೋವಿಂದರಾಜ ನಗರ, ವಿಜಯನಗರ, ಪುಲಕೇಶಿನಗರ, ಶಾಂತಿನಗರ ಸೇರಿದಂತೆ ಒಟ್ಟು ಒಂಬತ್ತು ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ಅನುದಾನ ನೀಡಲು ಸಭೆಯಲ್ಲಿ ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ.
ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ತಲಾ ರೂ.25 ಕೋಟಿಗಳಂತೆ 225 ಕೋಟಿ ಅನುದಾನ ನೀಡಲು ಸಭೆಯಲ್ಲಿ ಒಪ್ಪಿಗೆ ದೊರಕಿದೆ ಎಂದು ತಿಳಿದು ಬಂದಿದೆ.