ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನ ಸುಂದರ್‌ಬನಿ ಸೆಕ್ಟರ್‌ನಲ್ಲಿ ಉಗ್ರರ ವಿರುದ್ಧದ ಶೋಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಯ ಹೆಮ್ಮೆಯ ಶ್ವಾನ ಫ್ಯಾಂಟಮ್ ಕೊನೆಯುಸಿರೆಳೆದಿದೆ.
ಭದ್ರತಾ ಪಡೆಯ ಶೋಧ ಕಾರ್ಯಾಚರಣೆಯಲ್ಲಿ ಉಗ್ರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಫ್ಯಾಂಟಮ್ (4) ಸಾವನ್ನಪ್ಪಿದೆ.
ಬೆಲ್ಜಿಯನ್ ಮಾಲಿನೋಯಿಸ್ ತಳಿಯ ಶ್ವಾನವಾಗಿದ್ದ ಫ್ಯಾಂಟಮ್ ಏ೯ ಘಟಕದ ಆಕ್ರಮಣಕಾರಿ ಶ್ವಾನವಾಗಿತ್ತು. ಫ್ಯಾಂಟಮ್‌ನ ಧೈರ್ಯ, ನಿಷ್ಠೆ ಮತ್ತು ಸಮರ್ಪಣೆಯನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಸೇನೆ ತಿಳಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸೇನೆ, ನಮ್ಮ ಶ್ವಾನ ಫ್ಯಾಂಟಮ್‌ನ ತ್ಯಾಗಕ್ಕೆ ನಮನ ಸಲ್ಲಿಸುತ್ತೇವೆ. ನಮ್ಮ ಸೈನಿಕರು ಸಿಕ್ಕಿಬಿದ್ದ ಭಯೋತ್ಪಾದಕರ ಬಳಿಗೆ ತೆರಳುತ್ತಿದ್ದಾಗ ಫ್ಯಾಂಟಮ್ ಶತ್ರುಗಳ ದಾಳಿಗೆ ಒಳಗಾಯಿತು. ಅವನ ಧೈರ್ಯ, ನಿಷ್ಠೆ ಮತ್ತು ಸಮರ್ಪಣೆ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದೆ.
ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ನಡೆದ ಭದ್ರತಾ ಪಡೆಯ ಶೋಧ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಸೇನೆ ಹತ್ಯೆ ಮಾಡಿದೆ.